--ಇಲ್ಲಿ ಜಾಹೀರಾತು--

ಹೆಜ್ಜೇನು ದಾಳಿ- ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

On: April 2, 2025 2:00 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೊರಟಗೆರೆ: ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕ್ಷಣಾರ್ಧದಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಕೊರಟಗೆರೆ ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಹೆಜ್ಜೇನು ಆಕಸ್ಮಿಕ ದಾಳಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5 ವಿದ್ಯಾರ್ಥಿಗಳು, ಇಬ್ಬರು ಉಪನ್ಯಾಸಕರು ಹಾಗೂ ಹೆಜ್ಜೇನು ದಾಳಿಗೆ ಎದುರಾಗಿ ಚಲಿಸುತ್ತಿದ್ದ ವಾಹನ ಸವಾರರಿಗೂ ದಾಳಿ ಮಾಡಿದ್ದು, ಒಟ್ಟು 20 ಕ್ಕೂ ಹೆಚ್ಚಿನ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳ ತಪಾಸಣೆ ನಡೆಸಿ ಚಿಕಿತ್ಸೆ ನೀಡಿ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಪುರುಷೋತ್ತಮ್ ಧೈರ್ಯ ತುಂಬಿದ್ದಾರೆ.
ಹೆಜ್ಜೇನು ದಾಳಿಯಿಂದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕರನ್ನು ಮತ್ತು ವಿದ್ಯಾರ್ಥಿಗಳನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಈರಪ್ಪನಾಯ್ಕ ಭೇಟಿ ಮಾಡಿ ಆರೋಗ್ಯದ ವಿಚಾರಣೆ ನಡೆಸಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ವೈದ್ಯರ ಮಾರ್ಗದರ್ಶನದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದ್ದಾರೆ.

ಟೀ ಅಂಗಡಿ, ಹೋಟೆಲ್ ಹಾಗೂ ಪೆಟ್ರೋಲ್ ಬಂಕ್ ಮುಂಭಾಗದಲ್ಲಿದ್ದ ಜನರು ಹೆಜ್ಜೇನು ದಾಳಿಯ ವೇಳೆ ಚೆಲ್ಲಾಪಿಲ್ಲಿಯಾಗಿದ್ದು, ಸ್ಪಲ್ಪ ಸಮಯ ದ್ವಿಚಕ್ರ ವಾಹನ ಸವಾರರು ಭಯದಿಂದ ಸಂಚರಿಸುವ ವಾತಾವರಣ ಸೃಷ್ಟಿಯಾಗಿತ್ತು, ಅರಣ್ಯ ಇಲಾಖೆ ಅಧಿಕಾರಿಗಳು ಸರ್ಕಲ್ ಬಳಿ ಇರುವ ಸಾಲು ಸಾಲು ಮರಗಳಲ್ಲಿ ಕಟ್ಟಿರುವ ಹೆಜ್ಜೇನನ್ನು ತೆರವು ಮಾಡುವಂತೆ ವಿದ್ಯಾರ್ಥಿಗಳ ಪೋಷಕರು ಒತ್ತಾಯ ಮಾಡಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now