ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
ತಾಯಿ ವಿಜಯಲಕ್ಷ್ಮೀ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರ ಭೇಟಿ ತನಿಖೆ ಕೈಗೊಂಡಿದ್ದಾರೆ.
ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು