--ಇಲ್ಲಿ ಜಾಹೀರಾತು--

ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸಾವು

On: April 5, 2025 2:12 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಇಂದು ನಸುಕಿನಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.
ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವನ್ನಪ್ಪಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now