--ಇಲ್ಲಿ ಜಾಹೀರಾತು--

ದರ್ಶನ್ ಗೆ ಕೋರ್ಟ್ ಖಡಕ್ ವಾರ್ನಿಂಗ್

On: April 8, 2025 2:46 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಡಿ ಬಾಸ್ ದರ್ಶನ್ ಗೆ ಕೋರ್ಟ್ ಖಡಕ್ ವಾರ್ನಿಂಗ್ ಕೊಟ್ಟಿದ್ದು, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.20 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆದಿದೆ. ಆದರೆ ಮಂಗಳವಾರ ಕೋರ್ಟ್ ಗೆ ನಟ ದರ್ಶನ್ ಗೈರಾಗಿದ್ದರು. ಬೆನ್ನು ನೋವಿನ ಕಾರಣ ಹೇಳಿ ವಿಚಾರಣೆಯಿಂದ ವಿನಾಯಿತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಇಂತಹ ನೆಪವೊಡ್ಡಿ ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರಾಗಬಾರದು ಎಂದು ನಟ ದರ್ಶನ್ ಪರ ವಕೀಲರಿಗೆ ಕೋರ್ಟ್ ಎಚ್ಚರಿಕೆ ನೀಡಿದೆ. ಪವಿತ್ರಾ ಗೌಡ ಜೊತೆ ನಂದೀಶ್ ಸೇರಿದಂತೆ ಹಲವು ಆರೋಪಿಗಳು ಹಾಜರಾಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ನಂತರ ಕೋರ್ಟ್ ಎಲ್ಲಾ 17 ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now