--ಇಲ್ಲಿ ಜಾಹೀರಾತು--

ಕಾರು ಅಪಘಾತ: ನಾಲ್ವರ ಸಾವು

On: April 11, 2025 2:19 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಕಾರೊಂದು ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಇಂದು ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಕಾರು ಚಾಲಕ ಗೋಪಾಲ್(45), ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ತುಮಕೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಮಕ್ಕಳಿಬ್ಬರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎಂದು ತಿಳಿದು ಬಂದಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದರು.
ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now