--ಇಲ್ಲಿ ಜಾಹೀರಾತು--

ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವು

On: April 16, 2025 2:34 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಮೆಟ್ರೊ ಕಾಮಗಾರಿ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆಗೆ ಬಿಎಂಆರ್ ಸಿಎಲ್ ವಿಷಾಧ ವ್ಯಕ್ತ ಪಡಿಸಿದೆ.
ಲಾರಿಯಲ್ಲಿ ಸಾಗಿಸುತ್ತಿದ್ದ ವಯಾಡೆಕ್ಟ್ (ಬೃಹತ್ ತಡೆಗೋಡೆ) ಉರುಳಿ ಬಿದ್ದ ಪರಿಣಾಮ ಆಟೊ ಚಾಲಕ ಖಾಸಿಂ ಸಾಬ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಶಿಡ್ಲಘಟ್ಟ ಮೂಲದ ಖಾಸೀಂ ಸಾಬ್ ಕುಟುಂಬ ಬೆಂಗಳೂರಿನಲ್ಲಿ ವಾಸವಿತ್ತು ಎಂದು ಸಹ ಚಾಲಕರು ಮಾಹಿತಿ ನೀಡಿದ್ದಾರೆ.

ತಡರಾತ್ರಿ ಏರ್ಪೋರ್ಟ್ ಮಾರ್ಗದ ಮೆಟ್ರೊ ಕಾಮಗಾರಿಗೆ ಬಳಸಲು ವಯಾಡೆಕ್ಟ್ ಕೊಂಡೊಯ್ಯುತ್ತಿದ್ದ ಲಾರಿ ತಿರುವು ಪಡೆಯುವಾಗ ಅವಘಡ ಸಂಭವಿಸಿದೆ. ಅವಘಡದ ಮುನ್ಸೂಚನೆ ಅರಿತ ಪ್ರಯಾಣಿಕ ತಕ್ಷಣ ಆಟೊದಿಂದ ಇಳಿದಿದ್ದಾರೆ. ಆದರೆ, ಖಾಸೀಂ ಸಾಬ್ ಇಳಿಯುವಷ್ಟರಲ್ಲಿ ವಯಾಡೆಕ್ಟ್ ಉರುಳಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವಘಡವನ್ನು ಕಂಡ ಜನ ಕೂಡಲೇ ರಕ್ಷಣೆಗೆ ಧಾವಿಸಿದ್ದರು. ಆದರೆ ಬೃಹದಾಕಾರದ ವಯಾಡೆಕ್ಟ್ ತೆರವುಗೊಳಿಸಲು ಕ್ರೇನ್ ಇರದ ಕಾರಣ ಪ್ರಯತ್ನ ವಿಫಲವಾಗಿದೆ. ಘಟನೆ ನಡೆದ ಎರಡು ಗಂಟೆಗಳ ಬಳಿ ಕ್ರೇನ್ ತರಿಸಿ ವಯಾಡೆಕ್ಟ್ ತೆರವುಗೊಳಿಸಿ ಮೃತದೇಹವನ್ನು ಹೊರ ತೆಗೆಯಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now