--ಇಲ್ಲಿ ಜಾಹೀರಾತು--

ಮೂವರು ಮನೆಗಳ್ಳರ ಬಂಧನ

On: April 25, 2025 2:34 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಮೋಜು ಮಸ್ತಿಗಾಗಿ ಮನೆಗಳ್ಳತನ ಮಾಡಿ ಗೋವಾಗೆ ಪರಾರಿಯಾಗಿದ್ದ ಪ್ರಮುಖ ಆರೋಪಿ ಸೇರಿದಂತೆ ಮೂವರು ಮನೆಗಳ್ಳರನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿ 18.10ಲಕ್ಷ ರೂ.ಮೌಲ್ಯದ 213 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಪ್ರಮುಖ ಆರೋಪಿ ಶಿವಕುಮಾರ್ (27), ಸ್ನೇಹಿತರಾದ ಶಿವನಾಗಪ್ಪ ಮತ್ತು ಸುದರ್ಶನ್ ಬಂಧಿತ ಮನೆಗಳ್ಳರು. ಆರೋಪಿ ಶಿವಕುಮಾರ್ ಬಳ್ಳಾರಿ ಮೂಲದವನಾಗಿದ್ದು, ಈತನ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಹೆಸರುಘಟ್ಟದಲ್ಲಿರುವ ಹಾಲೋಬ್ರಿಕ್ ಸ್ ಕಾರ್ಖಾನೆಯಲ್ಲಿ ಶಿವಕುಮಾರ್ ಕೆಲಸ ಮಾಡುತ್ತಿದ್ದಾಗ ಆ ಪ್ರದೇಶ ಆತನಿಗೆ ಚೆನ್ನಾಗಿ ತಿಳಿದಿತ್ತು.ರಾಮಗೊಂಡನಹಳ್ಳಿ ಮುಖ್ಯರಸ್ತೆಯ ನಿವಾಸಿಯೊಬ್ಬರು.

ಪ್ರಮುಖ ಆರೋಪಿ ಶಿವಕುಮಾರ್ ಗೋವಾಗೆ ಹೋಗೋಣವೆಂದು ಆತನಿಗೆ ಹೇಳಿ ದಾಬಸ್ ಪೇಟೆಯ ಹೋಟೆಲ್ನಲ್ಲಿ ಊಟ ಮಾಡಿ ಮತ್ತೊಂದು ಮನೆ ಕಳ್ಳತನ ಮಾಡಿಕೊಂಡು ಬರುವುದಾಗಿ ಹೇಳಿ ನಂತರ ಮತ್ತೊಬ್ಬ ಸ್ನೇಹಿತನ ಜೊತೆ ಗೋವಾಗೆ ಪರಾರಿಯಾಗಿದ್ದಾನೆ.ಮಾರನೆಯ ದಿನ ಬೆಳಿಗ್ಗೆ ಮನೆಯ ನಿವಾಸಿ ವಾಪಸ್ ಬಂದು ನೋಡಿದಾಗ ಮುಂಬಾಗಿಲಿನ ಬೀಗವನ್ನು ಒಡೆದಿರುವುದು ಕಂಡು ಬಂದಿದೆ. ತಕ್ಷಣ ಒಳಗೆ ಹೋಗಿ ಕಬೋಡ್ ನೋಡಿದಾಗ ಅದರಲ್ಲಿದ್ದ 45 ಗ್ರಾಂ ಚಿನ್ನಾಭರಣ ಹಾಗೂ 6 ಲಕ್ಷ ಹಣ ಕಳವು ಆಗಿರುವುದು ಗೊತ್ತಾಗಿದೆ.ತಕ್ಷಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಖಚಿತ ಮಾಹಿತಿಯನ್ನು ಕಲೆಹಾಕಿ, ಹಗರಿಬೊಮನಹಳ್ಳಿ ಠಾಣಾ ವ್ಯಾಪ್ತಿಯ ದುರ್ಗಮ ದೇವಸ್ಥಾನದ ಬಳಿ ಇಬ್ಬರನ್ನು ಕೃತ್ಯಕ್ಕೆ ಬಳಸಿದ ಕಾರಿನ ಸಮೇತ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿರುವುದಾಗಿ ಹೇಳಿದ್ದು, ಮತ್ತೊಬ್ಬ ಸ್ನೇಹಿತನ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರಮುಖ ಆರೋಪಿ ಅಂದು ಬೆಳಗ್ಗೆ ಹಗರಿಬೊಮನಹಳ್ಳಿಯಿಂದ ಸ್ನೇಹಿತನ ಜೊತೆ ನಗರಕ್ಕೆ ಪ್ರವಾಸಕ್ಕೆಂದು ಬಂದು ನಂತರ ಬೀಗ ಹಾಕಿರುವ ಮನೆಯನ್ನು ಗುರುತಿಸಿ, ಆ ಮನೆಯ ಬೀಗವನ್ನು ಹೊಡೆದು ಮನೆಯಲ್ಲಿರುವ ಚಿನ್ನಾಭರಣ, ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡೋಣವೆಂದು ತಿಳಿಸಿದ್ದಾಗಿ ಪ್ರಮುಖ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದಾನೆ.
ತನಿಖೆಯನ್ನು ಮುಂದುವರೆಸಿದ ಪೊಲೀಸರು ಪ್ರಮುಖ ಆರೋಪಿಯನ್ನು ಬಳ್ಳಾರಿ ಜಿಲ್ಲೆಯ ಹಗರಿ ಬೊಮನಹಳ್ಳಿ ಶಾಲೆಯೊಂದರ ಬಳಿ ಬಂಧಿಸಿದ್ದಾರೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now