--ಇಲ್ಲಿ ಜಾಹೀರಾತು--

ಮೂರು ವರ್ಷದ ಹೆಣ್ಣು ಚಿರತೆ ಸಾವು

On: April 25, 2025 2:45 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಉರುಳುಗೆರೆ ಗ್ರಾಮದ ಹೇಮಾವತಿ ನಾಲೆಯಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು ಮೂರು ವರ್ಷದ ಹೆಣ್ಣು ಚಿರತೆಯೊಂದು ಸತ್ತು ಬಿದ್ದಿರುವುದು ಕಂಡು ಬಂದಿದೆ.
ಬೆಳಗ್ಗೆ ಚಿರತೆ ಸತ್ತಿರುವುದನ್ನು ಕಂಡ ಕೂಡಲೇ ಗ್ರಾಮಸ್ಥರು ಸಿ.ಎಸ್.ಪುರ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ, ಪೊಲೀಸರು ಅರಣ್ಯ ಇಲಾಖೆಯವರಿಗೆ ವಿಷಯ ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕ್ರಮ ಕೈಗೊಂಡಿದ್ದಾರೆ, ಚಿರತೆಯ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಎರಡು ಚಿರತೆ ಹೊಡೆದಾಡಿಕೊಂಡು ಸತ್ತಿರುವ ಸಾಧ್ಯಯತೆ ಇದೆ ಎನ್ನಲಾಗುತ್ತಿದೆ, ಮರಣೋತ್ತರ ಪರೀಕ್ಷೆ ನಂತರ ನಿಜ ಸಂಗತಿ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಜಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಸೆರೆ ಹಿಡಿಯುವಂತೆ ಗ್ರಾಮಸ್ಥರು ಪದೇ ಪದೆ ಒತ್ತಾಯಿಸುತ್ತಿದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now