--ಇಲ್ಲಿ ಜಾಹೀರಾತು--

ಆಕಸ್ಮಿಕ ಬೆಂಕಿಗೆ ಬಸ್ ಧಗಧಗ

On: April 26, 2025 1:58 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನಾಗಮಂಗಲ: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗನೆ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲ್ಲೂಕಿನ ಕದಬಹಳ್ಳಿ ಬಳಿ ಶನಿವಾರ ನಸುಕಿನ ವೇಳೆ ನಡೆದಿದೆ.
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು. ಕದಬಹಳ್ಳಿ ಟೋಲ್ ಗೇಟ್ ಬಳಿ ಇದ್ದಕ್ಕಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿದೆ. ಕೂಡಲೇ ಬಸ್ ಚಾಲಕ ಬಸ್ ನಲ್ಲಿದ್ದ 25 ಪ್ರಯಾಣಿಕರನ್ನು ತಮ್ಮ ಲಗೇಜ್ ಸಹಿತ ಕೆಗೆ ಇಳಿಯಲು ತಿಳಿಸಿದ್ದಾನೆ. ಬಳಿಕ ಎಲ್ಲ ಪ್ರಯಾಣಿಕರು ಬಸ್ನಿಂದ ಕೆಳಗೆ ಇಳಿದಿದ್ದಾರೆ. ಬಳಿಕ್ ಬಸ್ ನಲ್ಲಿ ಬೆಂಕಿಯ ಪ್ರಮಾಣ ಹೆಚ್ಚಿದ್ದು, ನೋಡನೋಡುತ್ತಿದ್ದಂತೆ ಬಸ್ ಧಗಧಗನೇ ಹೊತ್ತಿ ಉರಿದಿದೆ. ಸ್ಥಳಕ್ಕೆ ಭಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ ನ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬಂಡಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now