--ಇಲ್ಲಿ ಜಾಹೀರಾತು--

ಮದ್ಯ ಸೇವಿಸಿ ವಾಹನ ಚಾಲನೆ- 650 ಪ್ರಕರಣ ದಾಖಲು

On: April 28, 2025 2:15 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ನಗರದಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ 650ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದು, ಅತಿ ವೇಗವಾಗಿ ವಾಹನ ಚಲಾಯಿಸಿದವರಿಂದ ಒಟ್ಟು 1.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಏ.21 ರಿಂದ ಏ.27ರವರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸಿದವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸಿದವರು ಪತ್ತೆಯಾಗಿದ್ದಾರೆ ಎಂದು ಹೇಳಿದರು.
ನಗರದಾದ್ಯಂತ 53 ಸಂಚಾರ ಪೊಲೀಸ್ ಠಾಣೆಗಳ ಎಲ್ಲ ಸಂಚಾರ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಸಂಚಾರ ಪೊಲೀಸರ ಪ್ರಕಾರ, ಕುಡಿದು ವಾಹನ ಚಲಾಯಿಸುವವರ ವಿರುದ್ಧ ನಡೆದ ವಿಶೇಷ ಕಾರ್ಯಾಚರಣೆಯ ಸಮಯದಲ್ಲಿ, ಒಟ್ಟು 43,253 ವಾಹನಗಳನ್ನು ಪರಿಶೀಲಿಸಲಾಗಿದೆ ಮತ್ತು ಅಂತಹ ನಿಯಮಗಳನ್ನು ಉಲ್ಲಂಸುವವರ ವಿರುದ್ಧ 668 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಮಧ್ಯ, ಅತಿ ವೇಗವಾಗಿ ವಾಹನ ಚಲಾಯಿಸಿದವರ ವಿರುದ್ಧ 185 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವರಿಂದ ಒಟ್ಟು 1.89 ಲಕ್ಷ ರೂ. ದಂಡವನ್ನು ಸಂಗ್ರಹಿಸಲಾಗಿದೆ.
ಬೆಂಗಳೂರು ನಗರದಲ್ಲಿ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕುಡಿದು ವಾಹನ ಚಲಾಯಿಸುವುದು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸುವುದನ್ನು ತಡೆಯುವ ಉದ್ದೇಶದಿಂದ ಈ ವಿಶೇಷ ಅಭಿಯಾನ ನಡೆಸಲಾಗಿದೆ. ಈ ಅಭಿಯಾನವು ಮುಂದುವರಿಯಲಿದೆ’ ಎಂದು ಸಂಚಾರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now