ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರ ಸಾವು
ಬಳ್ಳಾರಿ: ಜಿಲ್ಲೆಯ ಶಿಡಿಗಿನಮೊಳ ಗ್ರಾಮದಲ್ಲಿ ಹೊಲದಲ್ಲಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರನ್ನು ರಾಜೇಶ್ (11) ಮತ್ತು ಶಿವಶಂರ್ಕ (12) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕ್ರಿಕೆಟ್ ಆಡಿದ ನಂತರ ಮಕ್ಕಳು ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ’ನಾಲ್ವರು ಬಾಲಕರು ಈಜಲೆಂದು ಕೃಷಿ ಹೊಂಡಕ್ಕೆ ತೆರಳಿದ್ದಾರೆ. ಈ ವೇಳೆ ಒಬ್ಬ ನೀರಿಗಿಳಿದ ಕೂಡಲೇ ಮುಳುಗಿದರೆ, ಆತನ ರಕ್ಷಣೆಗೆಂದು ನೀರಿಗಿಳಿದ ಮತ್ತೊಬ್ಬ ಬಾಲಕ ಕೂಡ ಮುಳುಗಿದ್ದಾನೆ’ ಎಂದು … Read more






