ಕಾರ್ ಗೆ ಬಸ್ ಡಿಕ್ಕಿ- ನಾಲ್ವರ ದುರ್ಮರಣ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಕಾರು ಮೈಸೂರು ಕಡೆಗೆ ಹೊರಟಿತ್ತು, ಈ ವೇಳೆ ಎಕ್ಸ್ ಪ್ರೆಸ್ ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ಕೆ ಎಸ್ ಆರ್ ಟಿ ಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ … Read more

ನಾಡ ಬಾಂಬ್ ಸ್ಫೋಟ- ನಾಯಿ ಸಾವು

ಹಾವೇರಿ: ಹಾವೇರಿಯಲ್ಲಿ ನಾಡ ಬಾಂಬ್ ಸ್ಫೋಟಗೊಂಡು ನಾಯಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಜಲ್ಲಾಪುರ ಗ್ರಾಮದಲ್ಲಿ ನಡೆದಿದೆ. ನಾಡಬಾಂಬ್ ಸ್ಪೋಟಗೊಂಡು ನಾಯಿ ಸಾವನಪ್ಪಿದೆ. ಗ್ರಾಮದ ಮಲ್ಲಿಕಾರ್ಜುನ ಗೌಡಗೆ ಸೇರಿದ ಜಮೀನಿನಲ್ಲಿ ನಾಡ ಬಾಂಬ್ ಪತ್ತೆಯಾಗಿದೆ. ಪ್ರಾಣಿಗಳನ್ನು ಬೇಟೆ ಆಡುವ ಉದ್ದೇಶದಿಂದ ನಾಡ ಬಾಂಬ್ ಇಟ್ಟಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಒಟ್ಟು 3 ನಾಡ ಬಾಂಬ್ ಗಳನ್ನು ದುಷ್ಕರ್ಮಿಗಳು ಪ್ರಾಣಿಗಳ ಬೇಟೆಗೆ ಇಟ್ಟಿದ್ದರು ಎನ್ನಲಾಗಿದೆ. ಒಂದು ನಾಡ ಬಾಂಬ್ ನಾಯಿ ಕಚ್ಚಿದ್ದರಿಂದ ಸ್ಫೋಟಗೊಂಡು ನಾಯಿ ಸಾವನಪ್ಪಿದೆ. … Read more

ಪ್ರಜ್ವಲ್ ರೇವಣ್ಣ ಅರ್ಜಿ ವಜಾ

ಬೆಂಗಳೂರು: ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಅತ್ಯಾಚಾರ ಪ್ರಕರಣದಿಂದ ಕೈಬಿಡಲು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ವಿಚಾರಣೆ ನಡೆಸಿದ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ವಿಚಾರಣೆ ಏ.9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಸಿಎಂಗೆ ಮತ್ತೆ ಮುಡಾ ಉರುಳು!

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಉರುಳು ಸುತ್ತಿಕೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಹೊಸ ಟೆನ್ಷನ್ ಶುರುವಾಗಿದೆ. ಮುಡಾ ಹಗರಣ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯ ಇಡಿ ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಇದ್ರಿಂದಾಗಿ ಸಿಎಂ ಗೆ ಹೊಸ ತಲೆನೋವು ಶುರುವಾಗಿದೆ. ಈ ಮಧ್ಯೆ ಮುಡಾ ಕೇಸ್ ಬಗ್ಗೆ ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಇಡಿ ತಕರಾರಿನ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆ ಮುಂದೂಡಿಕೆ ಮಾಡಿದೆ, … Read more

ಮೂವರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತ ತಂದೆ ತನ್ನ ಆರು ವರ್ಷದ ಮಗಳು ಸೇರಿದಂತೆ ಮೂವರನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (24) ಹಾಗೂ ಮಗಳು ಮೌಲ್ಯ (6)ಳನ್ನು ಕೊಲೆ ಮಾಡಿ ಆತ್ಮಹತ್ಯೆಮಾಡಿಕೊಂಡ ರತ್ನಾಕರ್ ಗೌಡ (40). ಈತ ಮೂಲತಃ ಕಳಸ ಸಮೀಪದ ಕಿತಲಿಕೊಂಡ ಗ್ರಾಮದ ನಿವಾಸಿ ಸಿಂಧು ಅವರ … Read more

ರಾಜು ಕಾಗೆ ಸಹೋದರನ ಪುತ್ರನ ಕಾರು ಅಪಘಾತ- ಸವಾರ ಸಾವು

ಬೆಳಗಾವಿ: ಶಾಸಕ ರಾಜು ಕಾಗೆಯ ಸಹೋದರನ ಪುತ್ರ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಕಿತ್ತೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದ್ದು. ಬೆಳಗಾವಿಯಿಂದ ಕಿತ್ತೂರಿಗೆ ಕೆಲಸಕ್ಕೆಂದು ಬಸವರಾಜ ಮತ್ತು ಇಬ್ಬರು ಸ್ನೇಹಿತರು ಬೈಕ್ ನಲ್ಲಿ ಹೊರಟಿದ್ದರು ಈ ವೇಳೆ ಕಿತ್ತೂರು ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ … Read more

ಲ್ಯಾಪ್ ಟಾಪ್ ಕದಿಯುತ್ತಿದ್ದವನ ಬಂಧನ

ಬೆಳಗಾವಿ: ನಗರದಲ್ಲಿ ಪಾರ್ಕಿಂಗ್ ಮಾಡಿದ್ದ ದುಬಾರಿ ಕಾರಿನ ಗ್ಲಾಸ್ ಸರಿಸಿ ಗಾಡಿಯೊಳಗೆ ಇರಿಸಲಾಗಿದ್ದ ಬ್ಯಾಗ್, ಲ್ಯಾಪ್ ಟಾಪ್ ಗಳನ್ನು ಎಗರಿಸುತ್ತಿದ್ದ ಐನಾತಿ ಕಳ್ಳನನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ದೀನದಯಾಳ (20) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ನೆಹರು ನಗರದಲ್ಲಿ ನಿಲ್ಲಿಸಿದ್ದ ಕಾರಿನಿಂದ ಲ್ಯಾಪ್ ಟಾಪ್ ಕಳುವಾಗಿರುವ ಬಗ್ಗೆ ದೂರು ದಾಖಲಿಸಲಾಗಿತ್ತು. ಪ್ರಕರಣದ ತನಿಖೆಗೆ ಇಳಿದ ಮಾಳಮಾರುತಿ ಠಾಣಾ ಪೊಲೀಸರಿಗೆ ಆರೋಪಿಯ ಗುರುತು ಪತ್ತೆಯಾಗಿದೆ. ಕಳುವಿನಲ್ಲಿ ಆರೋಪಿಗೆ ಆತನ ತಂದೆಯೂ ನೆರವು ಮಾಡಿದ ಬಗ್ಗೆ … Read more

ಹೆಜ್ಜೇನು ದಾಳಿ- ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

ಕೊರಟಗೆರೆ: ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕ್ಷಣಾರ್ಧದಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊರಟಗೆರೆ ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಹೆಜ್ಜೇನು ಆಕಸ್ಮಿಕ ದಾಳಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5 ವಿದ್ಯಾರ್ಥಿಗಳು, ಇಬ್ಬರು ಉಪನ್ಯಾಸಕರು ಹಾಗೂ ಹೆಜ್ಜೇನು ದಾಳಿಗೆ ಎದುರಾಗಿ ಚಲಿಸುತ್ತಿದ್ದ ವಾಹನ ಸವಾರರಿಗೂ ದಾಳಿ ಮಾಡಿದ್ದು, ಒಟ್ಟು 20 ಕ್ಕೂ ಹೆಚ್ಚಿನ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. … Read more

ಗೃಹಿಣಿ ನೇಣಿಗೆ ಶರಣು

ಕುಣಿಗಲ್: ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಳನೆ ವಾರ್ಡ್ನಲ್ಲಿ ನಡೆದಿದೆ. ನೇಣಿಗೆ ಶರಣಾದ ಗೃಹಿಣಿಯನ್ನು ಆಶಾ( 30 )ಎಂದು ಗುರುತಿಸಲಾಗಿದೆ, ಈಕೆಯ ಪತಿ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಮಾರಾಟ ಮಾಡಿ ತೀವ್ರ ಸಮಸ್ಯೆ ಉಂಟು ಮಾಡುತ್ತಿದ್ದ ಎಂದು ಆರೋಪಿಸಲಾಗಿದ್ದು, ಕೌಟುಂಬಿಕ ಗೊಂದಲದಿಂದ ಬೇಸತ್ತು ನೇಣಿಗೆ ಶರಣಾಗಿದ್ದು, ಘಟನೆ ಸಂಭಂದ ಕುಣಿಗಲ್ ಪ್ರವಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಿಲಿಂಡರ್ ಸ್ಪೋಟಗೊಂಡು ಮನೆಗಳು ಭಸ್ಮ

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಲ್ಲಯ್ಯನಪಾಳ್ಯ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ನಂತರ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಗಳು ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕಲ್ಲಯ್ಯನಪಾಳ್ಯ ಗ್ರಾಮದ ಗಂಗಾಧರ ಮತ್ತು ಅವರಿಗೆ ಸೇರಿದ ಮತ್ತೊಂದು ಮನೆ ಹಾಗೂ ಸಾವಿತ್ರಮ್ಮ ಗುಡ್ಡಯ್ಯ, ರೂಪ ಮಂಜುನಾಥ್ ಎಂಬುವವರ ಮನೆಗೆ ಬೆಂಕಿ ತಗಲಿದೆ. ಗಂಗಾ‘ರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂ‘ವಿಸಿ ಅವರ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ವೋಟಗೊಂಡ ಹಿನ್ನಲೆಯಲ್ಲಿ ಅಟ್ಟದಲ್ಲಿ ಹಾಕಿದ್ದ ನಾಲ್ಕು … Read more