ಬೆಂಗಳೂರು: ಪತಿ-ಪತ್ನಿಯ ನಡುವೆ ಮೊಬೈಲ್ ಸ್ಪೀಕರ್ ಆನ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ, ಪತ್ನಿ ತನ್ನ ಪತಿಗೆ ಮೊಬೈಲ್ ಸ್ಪೀಕರ್ ಆನ್ ಮಾಡಲು ಹೇಳಿದ್ದಾಳೆ, ಇದೇ ವಿಚಾರಕ್ಕೆ ಗಲಾಟೆ ನಡೆದು ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಪತ್ನಿಯ ಕತ್ತು ಹಿಸುಕಿ ಕೊಂದ ಆರೋಪಿಯನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ನಮಿತಾ ಸಾಹು (43) ಕೊಲೆಯದ ದುರ್ದೈವಿ.
ಲೋಕೇಶ್ ಕುಮಾರ್ ಗೆಹ್ಲೋಟ್ ಎಂಬಾತ ಬಂಧಿತ ಕೊಲೆ ಆರೋಪಿ ಎಂದು ತಿಳಿದುಬಂದಿದೆ.
ರಾಜಸ್ಥಾನದ ಲೋಕೇಶ್ ಕುಮಾರ್, ಕಬ್ಬನ್ ಪೇಟೆಯಲ್ಲಿ ಫೋಟೋ ಸ್ಟುಡಿಯೋ ಹೊಂದಿದ್ದ. ಐದು ವರ್ಷಗಳ ಹಿಂದೆ ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ನಮಿತಾ ಸಾಹು ಜೊತೆ ಮದುವೆಯಾಗಿ ಮಹಾಗಣಪತಿ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ.
ಮನೆ ಮಾಲೀಕ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಲೋಕೇಶ್ ಕುಮಾರ್ ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಪತ್ನಿ ಕೊಲೆ ಮಾಡಿದ ಪತಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು