--ಇಲ್ಲಿ ಜಾಹೀರಾತು--

ಗುಜರಾತ್ನಲ್ಲಿ ಮಳೆ, ಗಾಳಿಗೆ 14 ಮಂದಿ ಸಾವು

On: May 6, 2025 2:05 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಗುಜರಾತ್: ಅಹಮದಬಾದ್ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ 253 ತಾಲೂಕುಗಳ ಪೈಕಿ 168 ತಾಲೂಕುಗಳಲ್ಲಿ ಅಕಾಲಿಕ ಮಳೆಯಾಗಿದೆ, ಖೇಡಾ, ಗಾಂಧಿನಗರ, ಮೆಹ್ವಾನಾ ಮತ್ತು ವಡೋದರಾ ಜಿಲ್ಲೆಗಳಲ್ಲಿ 25 ರಿಂದ 40 ಮಿಮೀ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್ಇಒಸಿ) ಹೇಳಿಕೆಯಲ್ಲಿ ತಿಳಿಸಿದೆ.

ಬಿರು ಗಾಳಿಗೆ ಮರಗಳು, ಹೋರ್ಡಿಂಗ್ಗಳು ನೆಲಕ್ಕುರಳಿದ್ದು, ಹಲವು ಜಿಲ್ಲೆಗಳಲ್ಲಿ ಮನೆಗಳು ಕುಸಿದುಬಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now