ನೆಲಮಂಗಲ: ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂ‘ವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿಉರಿದಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ ಇರುವ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಮಂಗಳ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಗೋದಾಮು ಪೂರ್ತಿ ಬೆಂಕಿ ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ.ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ, ಪೀಣ್ಯ ಮತ್ತು ಯಶವಂತಪುರ ಭಾಗದ 12ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳೊಂದಿಗೆ ಅಧಿಕಾರಿಗಳೂ ಸೇರಿದಂತೆ 80 ಮಂದಿ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಸತತವಾಗಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾಗ ಕ್ಷಣಕ್ಷಣಕ್ಕೂ ಬೆಂಕಿಯ ಜ್ವಾಲೆ ಹೆಚ್ಚಾಗುತ್ತಿದ್ದದ್ದು ಕಂಡು ಬಂದಿತು.
ಶಾರ್ಟ್ ಸರ್ಕ್ಯೂಟ್ ನಿಂದ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಗೋದಾಮು ಮಾಜಿ ಸಚಿವ ಶ್ರೀಕಂಠಯ್ಯ ಅವರ ಅಳಿಯ ಕೃಷ್ಣಪ್ಪ ಎಂಬುವವರಿಗೆ ಸೇರಿದ್ದಾಗಿದ್ದು, ಈ ಗೋದಾಮನ್ನು ಶೆಲ್ ಕಂಪನಿಗೆ ಬಾಡಿಗೆಗೆ ನೀಡಲಾಗಿತ್ತು ಎಂದು ಗೊತ್ತಾಗಿದೆ.
ಅಗ್ನಿ ಅವಘಡ- 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು