ಚಿಕ್ಕಮಗಳೂರು : ರಾಜ್ಯದಲ್ಲಿ ಗೋವುಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿದೆ.
ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸಿದ್ದಾರೆ.
ಆದರೆ ಪ್ರಯತ್ನ ವಿಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಇದರಿಂದಾಗಿ ಹಸು ಸಾವನ್ನಪ್ಪಿದೆ. ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಸುವಿನ ಕೆಚ್ಚಲು ಕತ್ತರಿಸಿದ ಕಿಡಿಗೇಡಿಗಳು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು