ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯ ಸಮೀಪದಲ್ಲಿರುವ ಭದ್ರಾಪುರ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ, ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆಗೈದ ಸ್ಥಿತಿಯಲ್ಲಿ ಬಾಲಕಿಯ ಮೃತ ದೇಹವೊಂದು ಅರೆ ನಗ್ನಾವಸ್ಥೆಯಲ್ಲಿ ಪತ್ತೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮೇ 11ರಂದು ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಗಳ ಗುಂಪು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಬೆನ್ನು ಮೂಳೆ ಮುರಿದು ಕುತ್ತಿಗೆ ತಿರುಚಿ ಕ್ರೂರವಾಗಿ ಕೊಲೆಗೈದಿದ್ದಾರೆ. ಘಟನೆ ನಡೆದು ಮೂರು ದಿನಗಳ ಬಳಿಕ ಶವ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಬಿಡದಿ ಠಾಣಾ ಪೊಲೀಸರು ತಿಳಿಸಿದ್ದಾರೆ.
ನ್ಯಾಯ ಸಿಗುವವರೆಗೂ ಶವಸಂಸ್ಕಾರವಿಲ್ಲ..! ಮೇ 13ರಂದು ಬಾಲಕಿಯ ಮತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. 48 ಗಂಟೆಗಳಾದರೂ ಇನ್ನೂ ಮರಣೋತ್ತರ ವರದಿ ಬಂದಿಲ್ಲ. ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದರೂ ಪೊಲೀಸರು ನಂಬುತ್ತಿಲ್ಲ. ಹಂತಕರನ್ನು ಬಂಧಿಸಿ, ನ್ಯಾಯ ಸಿಗುವವರೆಗೂ ಶವಸಂಸ್ಕಾರ ಮಾಡುವುದಿಲ್ಲ ಎಂದು ಮನೆ ಮುಂದೆ ಮೃತ ಬಾಲಕಿಯ ಮೃತದೇಹ ಇಟ್ಟುಕೊಂಡು ಪೋಷಕರು ಪಟ್ಟು ಹಿಡಿದಿದ್ದಾರೆ.
ಮಾತು ಬರುತ್ತಿರಲಿಲ್ಲ, ಕಿವಿ ಕೇಳಿಸುತ್ತಿರಲಿಲ್ಲ..! ಬಾಲಕಿಗೆ ಮಾತು ಬರುತ್ತಿರಲಿಲ್ಲ, ಕಿವಿ ಕೇಳಿಸುತ್ತಿರಲಿಲ್ಲ. ಮೇ 11ರಂದು ಮನೆಯಿಂದ ಹೊರ ಹೋದ ಬಾಲಕಿಯು ಇದೀಗ ಅತ್ಯಾಚಾರಕ್ಕೊಳಗಾಗಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅವರು, ಮೃತ ಬಾಲಕಿಯ ಮನೆಗೆ ಬುಧವಾರ
ಬಾಲಕಿಯ ಮೃತ ದೇಹ ಪತ್ತೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು