ಮಂಡ್ಯ: ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ರೈಲು ನಿಲ್ದಾಣದ ಬಳಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕು ನೇರಲಕೆರೆ ಗ್ರಾಮದ ಚೇತನ್ (23) ಎಂಬಾತನೇ ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ವಿದ್ಯಾರ್ಥಿ. ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಅಂತಿಮ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಚೇತನ್ ಮಧ್ಯಾಹ್ನ ಮೈಸೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಒಡೆಯರ್ ಎಕ್ ಸ್ಪ್ರೆಸ್ ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭಾವಿಸಿದ ರೈಲ್ವೆ ಪೊಲೀಸರು ಶವವನ್ನು ವಶಕ್ಕೆ ಪಡೆದು ಮಿಮ್ ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು