ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಹೊರವಲಯ ಶ್ರೀನಿವಾಸಪುರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪೆಟ್ರೋಲ್ ಬಂಕ್ ಬಳಿ ಇರುವ ಮರಗಳು ಕಟಾವು ಮಾಡಲು ಅನುಮತಿ ಕೋರಿದ್ದ ರೈತನಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಉಪ ವಲಯ ಅರಣ್ಯಾಧಿಕಾರಿ ಹಾಗೂ ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶುಕ್ರವಾರ ಬೆಳಗ್ಗೆ ಚಿಂತಾಮಣಿ ನಗರದ ಕೋಲಾರ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ಕಚೇರಿಯಲ್ಲಿ ನಡೆದಿದೆ.ಲೋಕಾಯುಕ್ತ ಬಲೆಗೆ ಬಿದ್ದ ಉಪ ವಲಯ ಅರಣ್ಯಧಿಕಾರಿ ಧನಲಕ್ಷ್ಮೀ ಹಾಗೂ ವಾಹನ ಚಾಲಕ ಮಣಿಕಂಠ ಎಂದು ಗುರುತಿಸಲಾಗಿದೆ.
ಚಿಂತಾಮಣಿ ತಾಲೂಕಿನ ಶ್ರೀನಿವಾಸಪುರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪೆಟ್ರೋಲ್ ಬಂಕ್ ಬಳಿ ಇರುವ ಮರಗಳು ಕಟಾವು ಮಾಡಲು ಅನುಮತಿ ಕೋರಿದ್ದ ರೈತನಿಗೆ 50 ಸಾವಿರ ರೂ.ಹಣಕ್ಕೆ ಬೇಡಿಕೆ ಇಟ್ಟಿದ್ದು15 ಸಾವಿರ ರೂ.ಹಣ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ದಾಳಿ ನಡೆಸಿದ ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್, ಡಿವೈಎಸ್ ಪಿ ವೀರೇಂದ್ರ ಕುಮಾರ್ ಹಾಗೂ ಲೋಕಾಯುಕ್ತ ಸಿಬ್ಬಂದಿ ಕಚೇರಿಯಲ್ಲಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.