ಮಾಗಡಿ: ರಾಮನಗರ ಜಿಲ್ಲೆಯ ಮಾಗಡಿ ತಾಲೂತಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯುವತಿಯರನ್ನು ಬೆಂಗಳೂರು ಮೂಲದ 18 ವರ್ಷದ ರಾಘವಿ, 20 ವರ್ಷದ ಮಧುಮಿತ ಹಾಗೂ 22 ವರ್ಷದ ರಮ್ಯಾ ಎಂದು ಗುರುತಿಸಲಾಗಿದೆ.
ಏಳು ಯುವತಿಯರ ತಂಡ ಜಲಾಶಯ ವೀಕ್ಷಣೆಗೆಂದು ತೆರಳಿತ್ತು. ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದು ಆಕೆಯನ್ನು ರಕ್ಷಿಸಲು ಯುವತಿಯರು ಮುಂದಾಗಿದ್ದಾರೆ. ದುರಾದೃಷ್ಟವಶಾತ್ ಮೂವರು ಯುವತಿಯರು ನೀರುಪಾಲಾಗಿದ್ದು ನಾಲ್ವರು ಯುವತಿಯರನ್ನು ಯುವಕನೋರ್ವ ರಕ್ಷಿಸಿದ್ದಾನೆ. ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಜಲಾಶಯದಲ್ಲಿ ಮುಳುಗಿ 3 ಯುವತಿಯರ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು