--ಇಲ್ಲಿ ಜಾಹೀರಾತು--

ಕೆಸ್ ಆರ್ ಟಿಸಿ ಬಸ್ ಪಲ್ಟಿ- ಇಬ್ಬರು ಸಾವು

On: May 19, 2025 2:40 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕನಕಪುರ: ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆಎಸ್ ಆರ್ ಟಿ ಬಸ್ ಮೋರಿಗೆ ಪಲ್ಟಿಯಾಗಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಸಾವನ್ನಪ್ಪಿದ್ದಾರೆ, ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬಸ್ಸು ಬೆಳಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ, ರಸ್ತೆ ವಿಭಜಕದ ಮೇಲ್ ಹತ್ತಿಸಿದ್ದಾನೆ.
ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now