--ಇಲ್ಲಿ ಜಾಹೀರಾತು--

ಕೊಲೆ ಆರೋಪಿ ಕಾಲಿಗೆ ಗುಂಡು

On: May 19, 2025 2:41 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಶಿವಮೊಗ್ಗ: ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ ಎಂಬುವವರ ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು.
ಸೋಮವಾರ ಆ ಪ್ರಕರಣದಲ್ಲಿ ಭಾಗಿಯಾಗಿದ್ದ ಮಂಜ ಎಂಬ ಆರೋಪಿಯ ಇರುವಿಕೆ ತಿಳಿದುಕೊಂಡ ಪೊಲೀಸರು ಆತನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಆತ ಪೊಲೀಸ್ ಸಿಬ್ಬಂದಿ ಹರೀಶ್ ಎಂಬುವವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಬಳಿಕ ಹಿಡಿದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now