ಬೆಂಗಳೂರು: ಆನೇಕಲ್ ತಾಲ್ಲೂಕಿನ ಚಂದಾಪುರದ ಸೂರ್ಯನಗರ ಎಸ್ ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್ ಆಗಿ ಕೊನೆಗೂ ಕ್ಷಮೆ ಕೇಳಿದ ಘಟನೆ ಬಳಿಕ ಇದೀಗ ಅವರನ್ನು ಬೇರೆ ಕಡೆಗೆ ವರ್ಗಾಯಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಏನಿದು ಘಟನೆ?
ಹಣ ವರ್ಗಾವಣೆಗಾಗಿ ಮಹೇಶ್ ಎಂಬುವವರು ಬೆಳಗ್ಗೆ 10.27ಕ್ಕೆ ಬ್ಯಾಂಕ್ ಗೆ ಹೋಗಿದ್ದರು. ಯಾವ ಕೌಂಟರ್ ಗಳಲ್ಲೂ ಸಿಬ್ಬಂದಿ ಕಾಣಿಸಲಿಲ್ಲ. ಅಲ್ಲಿದ್ದ ಒಬ್ಬರನ್ನು ಪ್ರಶ್ನಿಸಿದಾಗ ನಾವು ಬರುವವರೆಗೆ ಕಾಯಿರಿ ಎಂದರು.
ಈ ವರ್ತನೆಯಿಂದ ಬೇಸರವಾಗಿ, ಕೆಲಸದ ಅವಧಿಯಲ್ಲಿ ಸಿಬ್ಬಂದಿ ಏಕೆ ಕೌಂಟರ್ ನಲ್ಲಿಲ್ಲ? ಇದನ್ನು ವ್ಯವಸ್ಥಾಪಕರ ಬಳಿ ಪ್ರಶ್ನಿಸುತ್ತೇನೆ ಎಂದು ಅವರ ಕೊಠಡಿ ಬಳಿ ಹೋದರು.
ಸಮಯ 10-30 ಆದರೂ, ಸಿಬ್ಬಂದಿ ಇಲ್ಲ ಎಂದು ಸೌಮ್ಯವಾಗಿಯೇ ವ್ಯವಸ್ಥಾಪಕರಲ್ಲಿ ಕೇಳಿಕೊಂಡರಂತೆ. ಅದಕ್ಕೆ ಮ್ಯಾನೇಜರ್ ನನಗೆ ಕನ್ನಡ ಗೊತ್ತಿಲ್ಲ. ಹಿಂದಿಯಲ್ಲಿ ಮಾತನಾಡು’ ಎಂದು ಅತ್ಯಂತ ದರ್ಪದಿಂದ ಅವರು ಮಾತನಾಡಿದರಂತೆ. ಈ ನಾಡಿನ ಭಾಷೆ ಕನ್ನಡ, ಕನ್ನಡದಲ್ಲಿ ಸೇವೆ ಒದಗಿಸಬೇಕಾಗಿರುವುದು ಬ್ಯಾಂಕ್ ಕರ್ತವ್ಯ. ಈ ಬಗ್ಗೆ ಆದೇಶ ಮತ್ತು ನಿಯಮವಿದೆ ಎಂದು ಹೇಳಿದೆ. ಆಗ ಮತ್ತಷ್ಟು ಕೆರಳಿದ ಅವರು ದುರ್ವತನೆ ತೋರಲು ಆರಂಭಿಸಿದಾಗ ಫೇಸ್ ಬುಕ್ ನಲ್ಲಿ ಲೈವ್ ಆರಂಭಿಸಿದ್ದಾಗಿ ಹೇಳಿದರು.
ಎಸ್ ಬಿ ಐ ಬ್ಯಾಂಕ್ ಮ್ಯಾನೇಜರ್ ಎತ್ತಂಗಡಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು