ಬೆಂಗಳೂರು: ‘ತುಂಗಭದ್ರಾ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ನಮ್ಮ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಗಮನಕ್ಕೆ ತಂದು ಸಭೆ ನಡೆಸುವ ಪ್ರಯತ್ನ ಮಾಡುತ್ತೇನೆ ಎಂದು ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಹೇಳಿದ್ದಾರೆ.
ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಕುಮ್ಕಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ‘ತುಂಗಭದ್ರಾ ನೀರಿನ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿದ್ದು, ನಮ್ಮ ಸಿಎಂ ನಾಯ್ಡು ಅವರಿಗೆ ಮಾಹಿತಿ ನೀಡುತ್ತೇನೆ’ ಎಂದರು.
ತುಂಗಭದ್ರಾ ನೀರಿನ ವಿಚಾರಕ್ಕೆ ಸಭೆಗೆ ಮನವಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು