ಬೆಂಗಳೂರು: ಸಬ್ ಇನ್ಸ್ ಪೆಕ್ಟರ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್ ಬಿ ಆರ್ ಬಡಾವಣೆಯಲ್ಲಿ ಸೋಮವಾರ ನಡೆದಿದೆ.
ಕೆ.ಜಿ.ಹಳ್ಳಿ ಠಾಣೆಯ ಪಿಎಸ್ ಐ ನಾಗರಾಜ್ ಅವರ ಪತ್ನಿ ಶಾಲಿನಿ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಸೋಮವಾರ ರಾತ್ರಿ ಎಚ್ ಬಿ ಆರ್ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲೇ ಶಾಲಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಾಲಿನಿ ಮೊದಲ ಪತಿಗೆ ವಿಚ್ಛೇದನ ನೀಡಿ ಬಳಿಕ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ನಾಗರಾಜ್ ಅವರನ್ನು ಎರಡನೇ ವಿವಾಹವಾಗಿದ್ದರು.
ಶಾಲಿನಿ ಹಾಗೂ ಪಿಎಸ್ ಐ ನಾಗರಾಜ್ ಇಬ್ಬರೂ ಇಳಕಲ್ ಮೂಲದವರು. ಮೃತ ಶಾಲಿನಿಗೆ 7 ವರ್ಷದ ಮಗು ಇದೆ. ಇಬ್ಬರು ಹೈಸ್ಕೂಲ್ನಿಂದಲೇ ಸ್ನೇಹಿತರಾಗಿದ್ದರು. ನಂತರ ಶಾಲಿನಿ ಎಂಎಸ್ ಸಿ ಹಾಗೂ ನಾಗರಾಜ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. ಆ ಬಳಿಕ ನಾಗರಾಜ್ ಬೆಂಗಳೂರಿನಲ್ಲಿ ಪಿಎಸ್ ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅದೇ ವೇಳೆ ಶಾಲಿನಿ ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್ ಗೆ ಪಿಎಸ್ ಐ ಪರೀಕ್ಷೆ ತಯಾರಿಗೆ ಆರ್ಥಿಕ ಸಹಾಯ ಕೂಡ ಮಾಡುತ್ತಿದ್ದರು ಎನ್ನಲಾಗಿದೆ.
ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು