ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಇದೇ ಮೊದಲ ಬಾರಿಗೆ ಕನ್ನಡತಿಯೊಬ್ಬರಿಗೆ ಈ ಪ್ರಶಸ್ತಿ ದೊರೆಯುತ್ತಿದೆ.
ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ಭಿಹಾರ್ಟ್ ಲ್ಯಾಂಪ್ ಭಿ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದ್ದು. ಈ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿ 57.34 ಲಕ್ಷ ನಗದನ್ನು ಒಳಗೊಂಡಿದೆ. ಮೇ 2024 ಮತ್ತು ಏಪ್ರಿಲ್ 2025 ರ ನಡುವೆ ಐರ್ಲೆಂಡ್ ನಲ್ಲಿ ಪ್ರಕಟವಾದ ಇಂಗ್ಲಿಷ್ ಗೆ ಅನುವಾದಿಸಲಾದ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ಈ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಬಾನು ಮುಷ್ತಾಕ್ ಅವರು ತಮ್ಮ ಅನುವಾದಕಿ ದೀಪಾ ಭಸ್ತಿ ಅವರೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಾಹಿತಿ ಬಾನು ಮುಷ್ತಾಕ್ ಗೆ ಬೂಕರ್ ಪ್ರಶಸ್ತಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು