--ಇಲ್ಲಿ ಜಾಹೀರಾತು--

ಅತ್ಯಾಚಾರ ಆರೋಪ- ಮಡೆನೂರು ಮನು ಅರೆಸ್ಟ್

On: May 22, 2025 2:35 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಅತ್ಯಾಚಾರ ಆರೋಪದಡಿ ನಟ ಮಡೆನೂರು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ, ಕಿರುತೆರೆ ನಟ ಮಡೆನೂರು ಮನು ವಿರುದ್ಧ ಯುವತಿಯೊಬ್ಬಳು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪವನ್ನು ಮಾಡಿ ಎಫ್ ಐ ಆರ್ ದಾಖಲಿಸಿದ್ದರು.
ಆರೋಪ ಕೇಳಿ ಬರುತ್ತಿದ್ದಂತೆ ನಟ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಶಾಂತಿಗ್ರಾಮದಲ್ಲಿ ಬೆಂಗಳೂರಿನ ಪೊಲೀಸರು ನಟನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

2018ರಲ್ಲಿ ಮನು ಹಾಗೂ ಸಂತ್ರಸ್ತೆ ನಡುವೆ ಪರಿಚಯವಾಗಿತ್ತು. ಯುವತಿಗೆ ಬಾಡಿಗೆ ಮನೆಯನ್ನು ಮನುವೇ ಹುಡುಕಿಕೊಟ್ಟಿದ್ದ. ಮನುಗೆ ಈಗಾಗಲೇ ಮದುವೆಯಾಗಿದ್ದು, ಒಂದು ಹೆಣ್ಣು ಮಗು ಕೂಡ ಇದೆ. 2022ರ ನವೆಂಬರ್ 29ರಂದು ಶಿವಮೊಗ್ಗದ ಶಿಕಾರಿಪುರದ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನು ಯುವತಿಯನ್ನು ಕಾರ್ಯಕ್ರಮದ ಬಳಿಕ ಸಂಭಾವನೆ ನೀಡುವ ನೆಪದಲ್ಲಿ ರೂಮ್ ಗೆ ಕರೆದು ಅತ್ಯಾಚಾರ ಮಾಡಿದ್ದ. ಅತ್ಯಾಚಾರವಾದ ಬಳಿಕ ಮನು 2022ರ ಡಿಸೆಂಬರ್ 3 ರಂದು ನನ್ನ ವಿರೋಧದ ನಡುವೆಯೂ ಬಲವಂತವಾಗಿ ತಾಳಿ ಕಟ್ಟಿದ್ದಾನೆ. ಆದಾದ ಬಳಿಕ ಹಲವು ಬಾರಿ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಅತ್ಯಾಚಾರದ ಬಳಿಕ ನಾನು ಪ್ರೆಗ್ನೆಂಟ್ ಆಗಿದ್ದು. ಮನು ಗರ್ಭಪಾತ ಆಗುವ ಮಾತ್ರೆ ನೀಡಿದ್ದರು. ಇದಾದ ಬಳಿಕವೂ ಸಂತ್ರಸ್ತೆ ಮತ್ತೊಮ್ಮೆ ಗರ್ಭಿಣಿ ಆಗಿದ್ದೆ. ಆ ಬಳಿಕ ಎರಡನೇ ಬಾರಿಯೂ ಮನು ಗರ್ಭಪಾತ ಮಾಡಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಾಡಿಗೆ ಮನೆಯಲ್ಲಿ ಮನು ನನ್ನ ಮೇಲೆ ಹಲವು ಬಾರಿ ದೈಹಿಕವಾಗಿ ಬಳಿಸಿಕೊಂಡಿದ್ದಾನೆ. ಇದೆಲ್ಲವನ್ನು ಆತ ತ
ನ್ನ ಫೋನಿನಲ್ಲಿ ಸೆರೆ ಹಿಡಿದುಕೊಂಡಿದ್ದಾನೆ. ಒಂದು ವೇಳೆ ವಿಚಾರ ಯಾರಿಗಾದ್ರೂ ಹೇಳಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ನನ್ನಿಂದ ಲಕ್ಷಾಂತರ ರೂಪಾಯಿ ರೂಪಾಯಿ ಹಣ ಕೂಡ ಪಡೆದಿದ್ದಾನೆ. ಈತನ ವಿರುದ್ದ ಕಾನೂನು ಕ್ರಮ ಜರುಗಿಸಿ ಅಂತ ದೂರಿನಲ್ಲಿ ತಿಳಿಸಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now