ಬೆಂಗಳೂರು: ಸರ್ಕಾರದ ಒಡೆತನದ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಉತ್ಪನ್ನಗಳಿಗೆ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಲಾಗಿದೆ. ತಮನ್ನಾ ಭಾಟಿಯಾ ಅವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ 6.20 ಕೋಟಿ ರೂ.ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ.
ಮೈಸೂರು ಸ್ಯಾಂಡಲ್ ಸೋಪ್ ಅನ್ನು 1916 ರಲ್ಲಿ ಮೈಸೂರಿನ ರಾಜ ಕೃಷ್ಣ ರಾಜ ಒಡೆಯರ್ ಬೆಂಗಳೂರಿನಲ್ಲಿ ಸರ್ಕಾರಿ ಸೋಪ್ ಕಾರ್ಖಾನೆಯನ್ನು ಸ್ಥಾಪಿಸಿದಾಗಿನಿಂದ ತಯಾರಿಸಲಾಗುತ್ತಿದೆ. ವರ್ಷಕ್ಕೆ 26,000 ಟನ್ ಸೋಪ್ ಉತ್ಪಾದಿಸುವ ಸ್ಥಾಪಿತ ಸಾಮರ್ಥ್ಯವನ್ನು ಈ ಕಾರ್ಖಾನೆಯನ್ನು ಹೊಂದಿದೆ. ಒಡೆಲಾ 2, ವೇದ ಸೇರಿದಂತೆ ಹಲವು ಸಿನಿಮಾಗಳು ನಟಿಯ ಕೈಯಲ್ಲಿವೆ. ತೆಲುಗು ಹಾಗೂ ಬಾಲಿವುಡ್ನಲ್ಲಿ ನಟಿ ಸಕ್ರಿಯರಾಗಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ ಗೆ ತಮ್ಮನ್ನ ರಾಯಭಾರಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು