--ಇಲ್ಲಿ ಜಾಹೀರಾತು--

ಅಪ್ರಾಪ್ತೆ ಮೇಲೆ ಅತ್ಯಾಚಾರ- ಸ್ವಾಮೀಜಿ ಬಂಧನ

On: May 24, 2025 2:05 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಳಗಾವಿ: ಜಿಲ್ಲೆಯ ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದು, ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆ. ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ ರಾಯಚೂರಿಗೆ ಕರೆದೊಯ್ದಿದ್ದಾರೆ. ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ಇದ್ದರು. ಬಳಿಕ ಮೇ 15ರಂದು ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿದ್ದರು. 2 ಕಡೆ ವಾಸ್ತವ್ಯ ಇದ್ದಾಗ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎನ್ನಲಾಗಿದೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now