--ಇಲ್ಲಿ ಜಾಹೀರಾತು--

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

On: May 24, 2025 2:13 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಎಚ್.ಡಿ.ಕೋಟೆ: ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ (55), ಪತ್ನಿ ಮಂಜುಳಾ (42), ಪುತ್ರಿ ಹರ್ಷಿತಾ ಮೃತಪಟ್ಟವರು.
ಶನಿವಾರ ಮುಂಜಾನೆ ಜಲಾಶಯಕ್ಕೆ ಆಗಮಿಸಿದ ಮೂವರೂ ಡೆತ್ ನೋಟ್ ಬರೆದು, ದಡದಲ್ಲಿ ಬೈಕ್ ನಿಲ್ಲಿಸಿ, ನೀರಿಗೆ ಹಾರಿದ್ದಾರೆ. ಗ್ರಾಮಸ್ಥರು ಆ ಮಾರ್ಗವಾಗಿ ಸಂಚರಿಸುವಾಗ ಬೈಕ್ ನಿಲ್ಲಿಸಿರುವುದನ್ನು ಗಮನಿಸಿ, ಚಪ್ಪಲಿಗಳೂ ದಡದಲ್ಲಿ ಬಿಟ್ಟಿರುವುದನ್ನು ನೋಡಿ ಪರಿಶೀಲಿಸಿದಾಗ ಬೈಕ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನಂತರ ಅವರು ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.
ಈಚೆಗೆ ಮಹದೇವಸ್ವಾಮಿ ದಂಪತಿಯ ಮೊದಲನೇ ಮಗಳು ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಡೆತ್ ನೋಟ್ ಪರಿಶೀಲನೆ ಮಾಡಿದ ಬಳಿಕ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now