ತಿಪಟೂರು: ರಾಷ್ಟ್ರೀಯ ಹೆದ್ದಾರಿ ಮತ್ತಿಹಳ್ಳಿ ಗೇಟ್ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ದುರ್ದೈವಿಗಳು ಅಯ್ಯನ ಬಾವಿ ನಿವಾಸಿಗಳಾದ ಉಮೇಶ್ (32), ರಜನಿಕಾಂತ್ (33) ಎಂದು ತಿಳಿದುಬಂದಿದೆ, ತಿಪಟೂರು ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ರಭಸವಾಗಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು ಪೂರ್ಣಗೊಳ್ಳದ ಕಾಮಗಾರಿ, ಒಂದೇ ಮಾರ್ಗದ ಎರಡು ಕಡೆ ಸಂಚಾರಕ್ಕೆ ಕಾರಣವಾಗಿದೆ, ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಡಿವೈಎಸ್ಪಿ ವಿನಾಯಕ ಶೆಟ್ಟಿಗೆರ, ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಚಂದ್ರಶೇಖರ್, ಹೊನ್ನವಳ್ಳಿ ಇನ್ಸ್ ಪೆಕ್ಟರ್ ರಾಜಶೇಖರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪಘಾತದಲ್ಲಿ ಇಬ್ಬರು ಯುವಕರ ಬಲಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು