ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡುವಂತೆ ಕೋರಿ ಬುಧವಾರ ಬೆಂಗಳೂರಿನ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು.
ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್ ಗೆ ತೆರಳಲು ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ಅನುಮತಿ ಕೋರಿ ಸಿ ಆರ್ ಪಿ ಸಿ ಸೆಕ್ಷನ್ 439(1) (ಚಿ) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಆರೋಪಿ ದರ್ಶನ್ ಅವರು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ನೀಡುವಾಗ ವಿದೇಶಕ್ಕೆ ತೆರಳುವಂತಿಲ್ಲ ಎಂಬ ಷರತ್ತನ್ನು ಕೋರ್ಟ್ ವಿಧಿಸಿತ್ತು. ಹೀಗೆ ತೆರಳಬೇಕು ಎಂದರೆ ಕೋರ್ಟ್ ಅನುಮತಿ ಕಡ್ಡಾಯ ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿತ್ತು.
ಇದೀಗ ದರ್ಶನ್ ಅವರು ವಿದೇಶಕ್ಕೆ ತೆರಳಲು ಅನುಮತಿ ಕೋರಿ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಇದಕ್ಕೆ ಯಾವ ರೀತಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದು ಸ್ಪಷ್ಟವಾಗಿಲ್ಲ. ದರ್ಶನ್ ಬೆಂಗಳೂರು ಬಿಟ್ಟು ತೆರಳುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿತ್ತು. ಆದರೆ, ಹೈಕೋರ್ಟ್ನಿಂದ ದೇಶ ಸುತ್ತಾಟ ಮಾಡಲು ದರ್ಶನ್ ಅನುಮತಿ ಪಡೆದರು. ರಾಜಸ್ಥಾನ ಸೇರಿದಂತೆ ಇನ್ನೂ ಅನೇಕ ಕಡೆಗಳಲ್ಲಿ ಡೆವಿಲ್ ಸಿನಿಮಾ ಶೂಟ್ ಮುಗಿಸಿ ದರ್ಶನ್ ವಾಪಸ್ ಆಗಿದ್ದರು. ಆದರೆ ಇದೀಗ ವಿದೇಶಕ್ಕೆ ಹಾರಲು ದರ್ಶನ್ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್ ಅವರು ಮಿಲನ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಹಾಡಿನ ಶೂಟ್ ಗಾಗಿ ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ ಸಿನಿಮಾ ಶೂಟಿಂಗ್ ಗಾಗಿ ದುಬೈ ಮತ್ತು ಯೂರೋಪ್ ಗೆ ತೆರಳಲು ಅವಕಾಶ ಕೋರಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ. 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅವಕಾಶ ಕೋರಲಾಗಿದೆ.
ವಿದೇಶ ಪ್ರಯಾಣಕ್ಕೆ ಅನುಮತಿಗೆ ದರ್ಶನ್ ಅರ್ಜಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು