--ಇಲ್ಲಿ ಜಾಹೀರಾತು--

ಫೋಕ್ಸೋ ಆರೋಪಿಗೆ ಶಿಕ್ಷೆ

On: May 29, 2025 2:20 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಬ್ಬನಿಗೆ ಜೀವಾವಧಿ ಹಾಗೂ ಮತ್ತೊಬ್ಬನಿಗೆ 20 ವರ್ಷ ಶಿಕ್ಷೆ ವಿಧಿಸಿ ಫೋಕ್ಸೋ ನ್ಯಾಯಾಲಯ ಆದೇಶಿಸಿದೆ.
ತಿಪ್ಪೇಶ್ ಕುಮಾರ್ಗೆ ಜೀವಾವಧಿ ಶಿಕ್ಷೆ, 2 ಲಕ್ಷ ದಂಡ ವಿಧಿಸಲಾಗಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ 2022 ಮಾರ್ಚ್ 15ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಮತ್ತೊಂದು ಪ್ರಕರಣದಲ್ಲಿ ಆಟೊ ಚಾಲಕ ಶಾಂತಿನಗರದ ಸೈಯದ್ ಶಫಿಕ್ (40) ಎಂಬಾತನಿಗೆ 20 ವರ್ಷ ಶಿಕ್ಷೆ, 1 ಲಕ್ಷ ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ 2023 ಅಕ್ಟೋಬರ್ 19ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಎರಡು ಪ್ರಕರಣಗಳಲ್ಲಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now