ಮಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ.
ಈ ಒಂದು ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಮತ್ತೊಂದು ದುರಂತ ನಡೆದಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ., ಕಡಲಿನ ಅಲೆಯ ಅಬ್ಬರಕ್ಕೆ ನಾಡ ದೋಣಿ ಮುಗುಚಿದೆ. ಈ ವೇಳೆ ನಾಡ ದೋಣಿಯ ಅವಶೇಷಗಳು ಕಡಲ ತೀರದಲ್ಲಿ ಬಂದು ಬಿದ್ದಿವೆ. ಇದೀಗ ಇಬ್ಬರು ಮೀನುಗಾರರಿಗಾಗಿ ಶೋಧ ನಡೆಸಲಾಗುತ್ತಿದೆ. ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಿದ್ದ ರೂ ಕೂಡ ಇವರು ಮೀನುಗಾರಿಕೆಗೆ ತೆರಳಿದ್ದಾಗ ಈ ಒಂದು ದುರ್ಘಟನೆ ನಡೆದಿದೆ.
ಗುಡ್ಡ ಕುಸಿತ- ಅಜ್ಜಿ, ಮೊಮ್ಮಕ್ಕಳು ಬಲಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು