ಕುಣಿಗಲ್: ಜೀವನದಲ್ಲಿ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬ ಸೇತುವೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಬೋರಲಿಂಗನ ಪಾಳ್ಯದ ತಿಮ್ಮಪ್ಪ (68) ಎಂದು ಗುರುತಿಸಲಾಗಿದೆ, ಈತ ಇದೇ ಗ್ರಾಮದವನಾಗಿದ್ದು, ಜೀವನದಲ್ಲಿ ಜಿಗುಪ್ಸೆಯಿಂದಾಗಿ ಕಳೆದ ಎರಡು ದಶಕದಿಂದ ಮನೆಬಿಟ್ಟು ಅಲೆಮಾರಿಯಾಗಿದ್ದು, ಶುಕ್ರವಾರ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿಗೆ ನಾಗಿನಿ ನದಿಗೆ ನಿರ್ಮಿಸಲಾಗಿದ್ದ ಸೇತುವೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ, ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು