ಮೈಸೂರು: ವ್ಯಕ್ತಿಯೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದೂ ಅಲ್ಲದೇ, ಮೂರ್ತಿ ಬಾಯಿಗೆ ಸಿಗರೇಟ್ ಇಟ್ಟು ಹುಚ್ಚಾಟ ಮೆರೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದ ವ್ಯಕ್ತಿ ಬಳಿಕ ಕೆಳಗಿಳಿದು ಬಂದಿದ್ದಾನೆ.ಮತ್ತೆ ಪ್ರತಿಮೆ ಬಳಿ ಹೋಗಿ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟಿದ್ದಾನೆ. ವ್ಯಕ್ತಿಯ ಹುಚ್ಚಾಟಕ್ಕೆ ಸಾರ್ವಜನಿಕರು ಗಾಬರಿಯಾಗಿದ್ದಾರೆ.
ಸ್ಥಳದಲ್ಲಿ ಜನರು ಸೇರುತ್ತಿದಂತೆ ವ್ಯಕ್ತಿ ಪರಾರಿಯಾಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯ ವಿಡಿಯೋ ವೈರಲ್ ಆಗಿದೆ. ಪರಾರಿಯಾಗಿರುವ ವ್ಯಕ್ತಿಯ ಪತ್ತೆಗಾಗಿ ದೇವರಾಜ ಠಾಣೆ ಪೊಲಿಸರು ಹುಡುಕಾಟ ನಡೆಸಿದ್ದಾರೆ.
ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಅಪಮಾನ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು