ಅತ್ಯಾಚಾರ ಆರೋಪ- ಮಡೆನೂರು ಮನು ಅರೆಸ್ಟ್

ಬೆಂಗಳೂರು: ಅತ್ಯಾಚಾರ ಆರೋಪದಡಿ ನಟ ಮಡೆನೂರು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ, ಕಿರುತೆರೆ ನಟ ಮಡೆನೂರು ಮನು ವಿರುದ್ಧ ಯುವತಿಯೊಬ್ಬಳು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪವನ್ನು ಮಾಡಿ ಎಫ್ ಐ ಆರ್ ದಾಖಲಿಸಿದ್ದರು. ಆರೋಪ ಕೇಳಿ ಬರುತ್ತಿದ್ದಂತೆ ನಟ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಶಾಂತಿಗ್ರಾಮದಲ್ಲಿ ಬೆಂಗಳೂರಿನ ಪೊಲೀಸರು ನಟನನ್ನು ವಶಕ್ಕೆ … Read more

ತುಂಗಭದ್ರಾ ನೀರಿನ ವಿಚಾರಕ್ಕೆ ಸಭೆಗೆ ಮನವಿ

ಬೆಂಗಳೂರು: ‘ತುಂಗಭದ್ರಾ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ನಮ್ಮ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಗಮನಕ್ಕೆ ತಂದು ಸಭೆ ನಡೆಸುವ ಪ್ರಯತ್ನ ಮಾಡುತ್ತೇನೆ ಎಂದು ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಹೇಳಿದ್ದಾರೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಕುಮ್ಕಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ‘ತುಂಗಭದ್ರಾ ನೀರಿನ ವಿಚಾರದ ಬಗ್ಗೆ … Read more

ಸಂಪ್ ಸ್ವಚ್ಛಗೊಳಿಸುವಾಗ ಇಬ್ಬರು ಕಾರ್ಮಿಕರು ಸಾವು

ತುಮಕೂರು: ನಗರ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಾರ್ಖಾನೆಯ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಧುಗಿರಿ ತಾಲ್ಲೂಕಿನ ಮಾಗೋಡು ಗ್ರಾಮದ ಪ್ರತಾಪ್ (23), ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ತರೂರು ಗ್ರಾಮದ ವೆಂಕಟೇಶ್ (32) ಮೃತರು. ತರೂರಿನ ಮಂಜಣ್ಣ (42), ಯುವರಾಜ್ (32) ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ರಾಸಾಯನಿಕ ಪದಾರ್ಥ ತಯಾರಿಸುವ ‘ಲಾರಸ್ ಬಯೋ’ ಎಂಬ ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ರಾಸಾಯನಿಕ ಸಂಗ್ರಹಿಸುವ ಸಂಪ್ … Read more

ನಾಡಗೀತೆ ಹಾಡಿ ಪವನ್ ಕಲ್ಯಾಣ್ ಕನ್ನಡಾಭಿಮಾನ

ಬೆಂಗಳೂರು: ‘ಜೈ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎಂಬ ನಾಡಗೀತೆಯ ಸಾಲುಗಳನ್ನು ಹೇಳುವ ಮೂಲಕ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ಖ್ಯಾತ ನಟ ಪವನ್ ಕಲ್ಯಾಣ್ ಕನ್ನಡಾಭಿಮಾನ ತೋರಿಸಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ ಕುಮ್ಕಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ರಾಷ್ಟ್ರಕವಿ ಕುವೆಂಪು ಕವನದ ಬಗ್ಗೆಯೂ ಪ್ರಸ್ತಾಪಿಸಿದರು.ಅರಣ್ಯದ ಬಗ್ಗೆ ಕುವೆಂಪು ಅವರಿಗೆ ಮಮಕಾರವಿತ್ತು. ತಮ್ಮ ಕವನಗಳಲ್ಲಿ ಹೆಚ್ಚಿನ ಮಹತ್ವ ಕೊಟ್ಟಿದ್ದರು. ಅವರನ್ನು ನಾವು ನೆನೆಯಬೇಕಿದೆ. ಇವತ್ತು ವಿಧಾನಸೌಧದಲ್ಲಿ ನಾನು … Read more

ವಿದ್ಯುತ್ ತಂತಿ ಹರಿದು 9 ಕುರಿ ಸಾವು

ವಿಜಯಪುರ: ಬಬಲೇಶ್ವರ ತಾಲೂಕಿನ ಉಪ್ಪಳದಿನ್ನಿ ಗ್ರಾಮದ ಬಳಿ ಹೈ ಟೆನ್ಶನ್ ವಿದ್ಯುತ್ ತಂತಿ ಹರಿದು 9 ಕ್ಕೂ ಹೆಚ್ಚು ಕುರಿಗಳ ಸಾವನ್ನಪ್ಪಿವೆ. ಬುಧವಾರ ಸಂಜೆ 5 ಗಂಟೆಗೆ ಸುಮಾರಿಗೆ ಜಮಖಂಡಿ ತಾಲೂಕಿನ ಹೂನ್ನೂರ ಗ್ರಾಮದ ಕುರಿಗಾಹಿ ದಶರಥ ಮಾರುತಿ ಸಸಲಾದಿ ಎಂಬುವವರಿಗೆ ಸೇರಿದ್ದ ಕುರಿಗಳು. ಮಳೆ ಜೋರಾಗಿದ್ದರಿಂದ ಕಾಲುವೆ ರಸ್ತೆ ಮೇಲೆ ಸುಮಾರು 600 ಕ್ಕೂ ಹೆಚ್ಚು ಕುರಿಗಳನ್ನು ಹೊಡೆದುಕೊಂಡು ಕುರಿಗಾಹೀಗಳು ಹೊರಟಿದ್ದರು. ಏಕಾಏಕಿ ವಿದ್ಯುತ್ ತಂತಿ ಹರಿದು ಕುರಿಗಳ ಮೇಲೆ ಬಿದ್ದಿದ್ದು ಕುರಿಗಳು ಸಾವನಪ್ಪಿವೆ. ಹಳೆಯದಾಗಿದ್ದ … Read more

ಸಾಹಿತಿ ಬಾನು ಮುಷ್ತಾಕ್ ಗೆ ಬೂಕರ್ ಪ್ರಶಸ್ತಿ

ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಇದೇ ಮೊದಲ ಬಾರಿಗೆ ಕನ್ನಡತಿಯೊಬ್ಬರಿಗೆ ಈ ಪ್ರಶಸ್ತಿ ದೊರೆಯುತ್ತಿದೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ಭಿಹಾರ್ಟ್ ಲ್ಯಾಂಪ್ ಭಿ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದ್ದು. ಈ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿ 57.34 ಲಕ್ಷ ನಗದನ್ನು ಒಳಗೊಂಡಿದೆ. ಮೇ 2024 ಮತ್ತು ಏಪ್ರಿಲ್ 2025 ರ ನಡುವೆ ಐರ್ಲೆಂಡ್ ನಲ್ಲಿ ಪ್ರಕಟವಾದ ಇಂಗ್ಲಿಷ್ ಗೆ ಅನುವಾದಿಸಲಾದ … Read more

ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ಬುಧವಾರ ಹರಿದ ನೀಲಿ ಬಣ್ಣದ ಸೂಟ್ ಕೇಸ್ ಪತ್ತೆಯಾಗಿದ್ದು, ಅದರಲ್ಲಿ ಯುವತಿಯ ಶವ ಇದ್ದದ್ದು ಆತಂಕ ಮೂಡಿಸಿತ್ತು, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್ ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಹೊರಗೆ ಎಸೆದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್ ಕೇಸ್ ನಲ್ಲಿ ತುಂಬಿದ್ದ … Read more

ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದೆ. ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬುಧವಾರ ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು … Read more

ಎಸ್ ಬಿ ಐ ಬ್ಯಾಂಕ್ ಮ್ಯಾನೇಜರ್ ಎತ್ತಂಗಡಿ

ಬೆಂಗಳೂರು: ಆನೇಕಲ್ ತಾಲ್ಲೂಕಿನ ಚಂದಾಪುರದ ಸೂರ್ಯನಗರ ಎಸ್ ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್ ಆಗಿ ಕೊನೆಗೂ ಕ್ಷಮೆ ಕೇಳಿದ ಘಟನೆ ಬಳಿಕ ಇದೀಗ ಅವರನ್ನು ಬೇರೆ ಕಡೆಗೆ ವರ್ಗಾಯಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಏನಿದು ಘಟನೆ? ಹಣ ವರ್ಗಾವಣೆಗಾಗಿ ಮಹೇಶ್ ಎಂಬುವವರು ಬೆಳಗ್ಗೆ 10.27ಕ್ಕೆ ಬ್ಯಾಂಕ್ ಗೆ ಹೋಗಿದ್ದರು. ಯಾವ ಕೌಂಟರ್ ಗಳಲ್ಲೂ ಸಿಬ್ಬಂದಿ ಕಾಣಿಸಲಿಲ್ಲ. ಅಲ್ಲಿದ್ದ ಒಬ್ಬರನ್ನು ಪ್ರಶ್ನಿಸಿದಾಗ ನಾವು ಬರುವವರೆಗೆ ಕಾಯಿರಿ ಎಂದರು. … Read more

ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಸಬ್ ಇನ್ಸ್ ಪೆಕ್ಟರ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್ ಬಿ ಆರ್ ಬಡಾವಣೆಯಲ್ಲಿ ಸೋಮವಾರ ನಡೆದಿದೆ. ಕೆ.ಜಿ.ಹಳ್ಳಿ ಠಾಣೆಯ ಪಿಎಸ್ ಐ ನಾಗರಾಜ್ ಅವರ ಪತ್ನಿ ಶಾಲಿನಿ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಸೋಮವಾರ ರಾತ್ರಿ ಎಚ್ ಬಿ ಆರ್ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲೇ ಶಾಲಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಲಿನಿ ಮೊದಲ ಪತಿಗೆ ವಿಚ್ಛೇದನ ನೀಡಿ ಬಳಿಕ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್ … Read more