ತುಮಕೂರು: ಕೋವಿಡ್ ಪಾಸಿಟೀವ್ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭು ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಕೋವಿಡ್ ಸಂಬಂಧಿ ತುರ್ತು ಪತ್ರಿಕಾ ಹೇಳಿಕೆ ನೀಡಿದ ಅವರು ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೂನ್ 2ರಂದು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಐಎಲ್ ಐ ಹಾಗೂ ಸಾರಿ ಪ್ರಕರಣಗಳಿಂದ 36 ಗಂಟಲು ದ್ರವ ಮಾದರಿ ಸಂಗ್ರಹಿಸಿ ಬೆಂಗಳೂರಿಗೆ ಕಳುಹಿಸಲಾಗಿತ್ತು, ಗುಬ್ಬಿ ತಾಲೂಕಿನ 13 ಹಾಗೂ ಶಿರಾ ತಾಲೂಕಿನ 1 ಸೇರಿದಂತೆ ಒಟ್ಟು 14 ಪ್ರಕರಣಗಳಲ್ಲಿ ಕೋವಿಡ್ ಪಾಸಿಟೀವ್ ದೃಢಪಟ್ಟ ಬಗ್ಗೆ ಮಂಗಳವಾರ ಬೆಳಗ್ಗೆ ವರದಿ ಬಂದಿದೆ, ಕೋವಿಡ್ ಪಾಸಿಟಿವ್ ಕಂಡು ಬಂದವರ ಪ್ರೈಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ ಟ್ ನಲ್ಲಿದ್ದವರನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ಕೋವಿಡ್ ಪಾಸಿಟೀವ್- ಜಿಲ್ಲೆಯಲ್ಲಿ 1 ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು