ಸಾವು ತಂದ ಅಭಿಮಾನ
ಬೆಂಗಳೂರು: ಸತತ 18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ನೂಕುನುಗ್ಗಲಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ.
ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ಉಂಟಾದ ತಳ್ಳಾಟ, ನೂಕುನುಗ್ಗಲಿನಿಂದ ಹಲವಾರು ಮಂದಿ ಅಸ್ವಸ್ಥಗೊಂಡಿದ್ದಾರೆ.
ಈ ಪೈಕಿ ಬೌರಿಂಗ್ ಆಸ್ಪತ್ರೆಯಲ್ಲಿ ರವಾನಿಸಲಾಗಿದ್ದು, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕೆಲವರನ್ನು ದಾಖಲಿಸಲಾಗಿದ್ದು, ನಾಲ್ವರು ಮಹಿಳೆ ಸೇರಿದಂತೆ ಹನ್ನೊಂದು ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು- 11 ಮಂದಿ ಸಾವು ಆರ್ಸಿಬಿಗೆ ಐಪಿಎಲ್ ಟ್ರೋಫಿ- ಸಂಭ್ರರಮಾಚರಣೆ ವೇಳೆ ದುರಂತ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು