--ಇಲ್ಲಿ ಜಾಹೀರಾತು--

ಅಕ್ರಮ ಜಾನುವಾರು ಸಾಗಾಟ ಪತ್ತೆ

On: June 4, 2025 2:31 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಗಳೂರು: ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಮಂಗಳೂರು ಕಮೀಷನರೇಟ್ ವ್ಯಾಪ್ತಿ ಹಾದು ಹೋಗುವ ರಸ್ತೆಗಳಲ್ಲಿ ಹೆಚ್ಚು ಚೆಕ್ ಪೋಸ್ಟ್ ಗಳನ್ನುತೆರೆದಿದ್ದು 01-06-2025 ರಂದು ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ ಆರೋಪಿಯನ್ನು ಬಂಧಿಸಿದ್ದಾರೆ.ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದ್ದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2025 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now