ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಅವರು, ಮಾತುಗಳೇ ಬರುತ್ತಿಲ್ಲ, ತೀವ್ರ ನೋವಾಗಿದೆ ಎಂದು ಆರ್ ಸಿಬಿ ಸ್ಟೇಟ್ ಮೆಂಟ್ ಪೋಸ್ಟ್ ಮಾಡಿದ್ದಾರೆ. ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರಾದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ಆರ್ ಸಿಬಿಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ದುರಂತ ಜೀವಹಾನಿಗೆ ಆರ್ ಸಿಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ರದ್ದು ಮಾಡಿ ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ ಎಂದು ತಿಳಿಸಿದೆ.
ಸಂತಾಪ ಸೂಚಿಸಿದ ವಿರಾಟ್ ಕೊಹ್ಲಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು