--ಇಲ್ಲಿ ಜಾಹೀರಾತು--

ಕಾಲ್ತುಳಿತದಲ್ಲಿ ಸಾವು- ಮನೋಜ್ ಕುಟುಂಬಕ್ಕೆ ಪರಿಹಾರ

On: June 9, 2025 2:10 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿಜಯೋತ್ಸವ ವೀಕ್ಷಿಸಲು ಹೋಗಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಣಿಗಲ್ ಅಮೃತೂರಿನ ಮನೋಜ್ ಕುಮಾರ್ ತಂದೆಗೆ ಸರ್ಕಾರ ವತಿಯಿಂದ 25 ಲಕ್ಷ ರೂ. ಪರಿಹಾರ ವಿತರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೃತ ಮನೋಜ್ ತಂದೆ ದೇವರಾಜುಗೆ ಪರಿಹಾರದ ಚೆಕ್ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮುಖ್ಯಮಂತ್ರಿ ಗಳ ರಿಲೀಫ್ ಫಂಡ್ ನಿಂದ ನಮಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಿಂದ ತಕ್ಷಣ 25 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ಬಂದಿದ್ದು ಅದರಂತೆ ನಾವು ಪರಿಹಾರದ ಚೆಕ್ ನೀಡಿದ್ದೇವೆ ಎಂದರು.
ದೇವರಾಜು ಮಾತನಾಡಿ ಸರ್ಕಾರ ಹಣ ನೀಡಿದೆ, ಆದರೆ ನಮ್ಮ ಮಗ ಬದುಕಿ ಬರಲಿಲ್ಲ, ಮುಂದಿನ ದಿನಗಳಲ್ಲಿ ನಮಗೆ ಆದಂತೆ ಬೇರೆ ಯಾರಿಗೂ ಆಗುವುದು ಬೇಡ, ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು, ನನ್ನ ಮಗ ವಿದ್ಯಾರ್ಥಿ ಇನ್ನು ಎರಡು ವರ್ಷ ಹೋಗಿದ್ದರೆ ಉತ್ತಮ ಉದ್ಯೋಗ ಸಂಪಾದಿಸಿ ಇದಕ್ಕಿಂತ ಎರಡರಷ್ಟು ಸಂಪಾದನೆ ಮಾಡುತ್ತಿದ್ದ, ಪರಿಹಾರದ ಹಣವನ್ನು ಅವನ ತಂಗಿ ಹಾಗೂ ತಾಯಿ ಖಾತೆಗೆ ಹಾಕುತ್ತೇವೆ, ಅವರಿಗೆ ಮುಂದಿನ ದಿನಗಳಲ್ಲಿ ಅನುಕೂಲವಾಗುತ್ತದೆ, ಮಗಳಿದ್ದಾಳೆ ಅವಳಿಗಾದರೂ ಉತ್ತಮ ಭವಿಷ್ಯ ರೂಪಿಸಿ ಕೊಡುತ್ತೇನೆ ಎಂದು ದುಃಖ ತೋಡಿಕೊಂಡರು, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಹಾಗೂ ಕುಣಿಗಲ್ ತಹಸೀಲ್ದಾರ್ ರಶ್ಮಿ ಇದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now