ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲುಪಾಲಾಗಿದ್ದಾರೆ.
ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿ, ಒಂದು ವಾರದೊಳಗೆ ಕೋರ್ಟ್ ಗೆ ಶರಣಾಗುವಂತೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ವಿನಯ್ ಕುಲಕರಣಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಶರಣಾಗಿದ್ದರು.ಈ ವೇಳೆ ಕೋರ್ಟ್, ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ಶಾಸಕ ವಿನಯ್ ಕುಲಕರಣಿ ಮತ್ತೆ ಜೈಲುಪಾಲಾಗಿದ್ದಾರೆ.
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಪಾಲು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು