ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಖೈದಿಗಳಿಗೆ ಮೊಬೈಲ್ ಸರಬರಾಜು ಮಾಡುತ್ತಿದ್ದ ಇಬ್ಬರು ಮನಃಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೈಲಿನೊಳಗಿರುವ ಖೈದಿಗಳ ಮನಃ ಪರಿವರ್ತನೆಗಾಗಿ ಮನಃಶಾಸ್ತ್ರಜ್ಞೆ ಆಗಾಗ್ಗೆ ಪರಪ್ಪನ ಕಾರಾಗೃಹಕ್ಕೆ ಹೋಗುತ್ತಿದ್ದರು. ಮೊನ್ನೆ ಮನಃಶಾಸ್ತ್ರಜ್ಞೆ ಮೊಬೈಲ್ ತೆಗೆದುಕೊಂಡು ಹೋಗುತ್ತಿದ್ದಾಗ ಜೈಲಿನ ಅಧಿಕಾರಿಗೆ ಮೊಬೈಲ್ ಸಮೇತ ಸಿಕ್ಕಿಬಿದ್ದಿದ್ದಾರೆ. ನಂತರ ಅವರನ್ನು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮನಃಶಾಸ್ತ್ರಜ್ಞೆಯನ್ನು ವಿಚಾರಣೆಗೆ ಒಳಪಡಿಸಿದಾಗ, ತನಗೆ ಮತ್ತೊಬ್ಬ ಸೈಕ್ಯಾಟ್ರಿಸ್ಟ್ ಮೊಬೈಲ್ ತಂದುಕೊಟ್ಟಿದ್ದಾಗಿ ಹೇಳಿದ್ದರಿಂದ ಆತನನ್ನೂ ಸಹ ಬಂಧಿಸಿರುವ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.
ಖೈದಿಗಳಿಗೆ ಮೊಬೈಲ್ ಸರಬರಾಜು- ಇಬ್ಬರ ಬಂಧನ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು