--ಇಲ್ಲಿ ಜಾಹೀರಾತು--

ಬಸ್ ಚಾಲಕನಿಗೆ ಚಪ್ಪಲಿಯಿಂದ ಥಲಿತ

On: June 14, 2025 2:11 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಬಸ್ ಚಾಲಕ ತನ್ನ ಆಫೀಸ್ ಬಳಿ ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಹಿಳೆ ಚಪ್ಪಲಿಯಿಂದ ಬಸ್ ಚಾಲಕನನ್ನು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಟಿನ್ ಫ್ಯಾಕ್ಟರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಬಸ್ ತೆರಳುತ್ತಿತ್ತು. ಬಸ್ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿ ಬಳಿ ತಲುಪಿದಾಗ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಅಮಡುತ್ತಿದ್ದ ಮಹಿಳಾ ಪ್ರಯಾಣಕಿ ಕಾವ್ಯಾ, ಬಸ್ ನಿಲುಗಡೆ ಇಲ್ಲದಿದ್ದರೂ ತನ್ನ ಕಚೇರಿ ಬಳಿ ಬಸ್ ನಿಲ್ಲಿಸುವಂತೆ ಹೇಳಿದ್ದಾರೆ. ಆದರೆ ಟ್ರಾಫಿಕ್ ನಿಂದಾಗಿ ಬಸ್ ಚಾಲಕ ಅಲ್ಲಿ ಬಸ್ ನಿಲ್ಲಿಸದೇ ಮುಂದೆ ಹೋಗಿದ್ದಾರೆ. ಇಷ್ಟಕ್ಕೆ ಕಿರುಚಾಡಿ ಗಲಾಟೆ ಮಾಡಿದ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ತನ್ನ ಚಪ್ಪಲಿ ತೆಗೆದು ಚಾಲಕನಿಗೆ ಬಾರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಘಟನೆ ಜೂನ್ 11ರಂದು ಬೆಳಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ, ಈ ಬಗ್ಗೆ ಚಾಲಕ ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆ ವಿರುದ್ಧ ಸೆಕ್ಷನ್ 121, 131, 132, 352 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now