ಗುಬ್ಬಿ: ಜಮೀನಿನ ವ್ಯಾಜ್ಯದ ಸಂಬಂಧವಾಗಿ ಬುಧವಾರ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದ ಕಕ್ಷಿದಾರರೊಬ್ಬರು ನ್ಯಾಯಾಲಯದ ಆವರಣದಲ್ಲಿಯೇ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಚೇಳೂರು ಹೋಬಳಿ ಕಚ್ಚೇನಹಳ್ಳಿಯ ರಮೇಶ್ (55) ಎಂದು ಗುರ್ತಿಸಲಾಗಿದೆ. ಚೇಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಮೃತರು ನ್ಯಾಯಾಲಯದಲ್ಲಿ ವಿಚಾರಣೆ ಇದ್ದ ಕಾರಣ ಬೆಳಗ್ಗೆ ಮನೆಯಿಂದ ಬಂದು ನ್ಯಾಯಾಲಯದ ಆವರಣದಲ್ಲಿ ಕುಳಿತಿದ್ದರು ಎನ್ನಲಾಗಿದೆ.
ನ್ಯಾಯಾಲಯದ ಕಲಾಪಗಳು ಪ್ರಾರಂಭಗೊಂಡಾಗ ಒಳಗೆ ಹೋಗುವ ಸಂದರ್ಭಲ್ಲಿ ಕುಸಿದು ಬಿದ್ದಿದ್ದಾರೆ, ತಕ್ಷಣ ಸಮೀಪದಲ್ಲಿದ್ದ ಕಕ್ಷಿದಾರರು ಹಾಗೂ ವಕೀಲರು ಆಗಮಿಸಿ ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ, ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಗತ್ಯಕ್ರಮ ಕೈಗೊಂಡ ನಂತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ನೀಡಿದ್ದಾರೆ.
ಕುಸಿದು ಬಿದ್ದು ಕಕ್ಷಿದಾರ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು