--ಇಲ್ಲಿ ಜಾಹೀರಾತು--

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ದಾಳಿ

On: June 18, 2025 2:35 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ದಾಳಿ ವೇಳೆ ಚಾಕು, ಕತ್ತರಿ, ಸಿಗರೇಟು ಸೇರಿದಂತೆ ಹಲವು ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್ ಪೂರೈಸುತ್ತಿದ್ದ ಕಾರಾಗಹ ಆಸ್ಪತ್ರೆಯ ಇಬ್ಬರು ಆಪ್ತ ಸಮಾಲೋಚಕರನ್ನು ಕಳೆದ ವಾರ ಬಂಧಿಸಲಾಗಿತ್ತು.
ಹೊರ ಗುತ್ತಿಗೆ ಆಧಾರದಲ್ಲಿ ಆಪ್ತ ಸಮಾಲೋಚಕರಾಗಿ ಕೆಲಸ ಮಾಡುತ್ತಿದ್ದ ನವ್ಯಶ್ರೀ (33) ಮತ್ತು ಸೃಜನ್ (33) ಕಾವಲು ಸಿಬ್ಬಂದಿಯ ಕಣ್ತಪ್ಪಿಸಿ ಕೈದಿಗಳಿಗೆ ಮೊಬೈಲ್ ಪೂರೈಸುತ್ತಿದ್ದರು.
ನವ್ಯಶ್ರೀ ಅವರು ತಮ್ಮ ಬ್ಯಾಗ್ ನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡು ಜೈಲಿನ ಒಳಕ್ಕೆ ಹೋಗಲು ಯತ್ನಿಸಿದ್ದರು, ಆಗ ಪ್ರವೇಶ ದ್ವಾರದಲ್ಲಿದ್ದ ಸಿಬ್ಬಂದಿ ಬ್ಯಾಗ್ ಪರಿಶೀಲನೆ ನಡೆಸಿದಾಗ ಮೊಬೈಲ್ ಪತ್ತೆ ಆಗಿತ್ತು. ಬಂಧಿತರನ್ನು ವಿಚಾರಣೆ ನಡೆಸಿದಾಗ ಜೈಲಿನ ಒಳಗೆ ಕೆಲವು ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಬಹಿರಂಗಗೊಂಡಿತ್ತು.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now