ಬೆಳಗಾವಿ: ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇರುವಾಗಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ಆರಂಭಿಸಿದೆ. ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರ ಸಮಿತಿ ಪುನರ್ ರಚನೆ ಮಾಡಿ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಡ್ನವೀಸ್ ಸಮಿತಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ ಏಕನಾಥ ಶಿಂಧೆ, ಅಜಿತ್ ಪವಾರ್, ಎನ್ಸಿಪಿ ನಾಯಕ ಶರದ್ ಪವಾರ್, ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚವ್ಹಾಣ್, ಬಿಜೆಪಿ ಸಂಸದ ನಾರಾಯಣ್ ರಾಣೆ ಸೇರಿ 18 ಜನ ಸಮಿತಿ ಸದಸ್ಯರು ಸಮಿತಿಯಲ್ಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಗ್ರಾಮಗಳ ಸೇರ್ಪಡೆಗೆ ಮಹಾರಾಷ್ಟ್ರ ಸರ್ಕಾರ ಹೊಸ ಯೋಜನೆ ಮಾಡಿದೆ.
ಬೆಳಗಾವಿ, ಬೀದರ್, ಕಾರವಾರ, ನಿಪ್ಪಾಣಿ, ಭಾಲ್ಕಿ ಸೇರಿ 814 ಗ್ರಾಮಗಳು ತಮಗೆ ಸೇರಿದ್ದುಎಂದು ಮಹಾರಾಷ್ಟ್ರ ವಾದಿಸುತ್ತ ಬಂದಿದೆ. ಈ ಹಿಂದೆ ಸಮಿತಿ ರಚನೆ ಮಾಡಿ ಆರೋಗ್ಯ, ಶಿಕ್ಷಣ ಸೇವೆ ನೀಡುವ ತೀರ್ಮಾನ ಕೈಗೊಂಡಿದ್ದ ಮಹಾ ಸರ್ಕಾರ, ಈಗ ಸಮಿತಿ ಪುನರ್ ರಚನೆ ಮಾಡಿ ಮತ್ತೆ ಕ್ಯಾತೆ ತೆಗೆಯಲು ಮುಂದಾಗಿದೆ.ಮಹಾರಾಷ್ಟ್ರ ಸರ್ಕಾರದ ನಡೆಗೆ ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು