ಬೆಂಗಳೂರು: ಆನೇಕಲ್ ನ ಮೈಲಸಂದ್ರದಲ್ಲಿ ಪುಂಡರ ಗುಂಪೊಂದು ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪ್ರಕರಣವನ್ನು ಗಂಭೀರವಾಗಿ ತೆಗೆದು ಕೊಂಡಿದ್ದು, ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿಯೇ ಪೊಲೀಸ್ ಇಲಾಖೆ ಇದೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಸಮಾಜದಲ್ಲಿ ಇಂತಹ ಕೃತ್ಯಗಳನ್ನು ತೀವ್ರವಾಗಿ ಪರಿಗಣಿಸಲಾಗುತ್ತದೆ ಎಂದರು. ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಪ್ರಕರಣದಲ್ಲಿ ಪೊಲೀಸರ ವೈಫಲ್ಯಗಳಿವೆ ಎಂಬ ವರದಿಯ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ಅದನ್ನು ಪರಿಶೀಲಿಸಿ ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.
ಮಹಿಳೆ ಮೇಲೆ ಹಲ್ಲೆ ಕೃತ್ಯ ಸಹಿಸಲ್ಲ: ಪರಂ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು