ಹಾವೇರಿ: ಮಟ ಮಟ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರ ಶಿವು ಕುನ್ನೂರು ಎಂಬುವವರನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಸುಮಾರು ಎಂಟರಿಂದ ಹತ್ತು ಜನರ ತಂಡ ಕಾರಿನಲ್ಲಿ ಬಂದು ಹೋಂಡಾ ಶೋ ರೂಂ ಬಳಿ ನಿಂತಿದ್ದ ಕಾಂಗ್ರೆಸ್ ಮುಖಂಡ ಶಿವಾನಂದ ಕುನ್ನೂರ ಅವರ ಮೇಲೆ ಏಕಾಏಕಿ ದಾಳಿ ಮಾಡುವ ಮೂಲಕ ಕೊಲೆಗೈದು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡು ಶಿವು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಶಿವು ಕೊಲೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು